Uncategorized

ವಿದ್ಯಾರ್ಥಿ ವೇತನ – ಪ್ರತಿಭಾ ಪುರಸ್ಕಾರಕ್ಕೆ ವಿಪ್ರ ತ್ರಿಮತಸ್ಥ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮೈಸೂರು,ಜೂ.27 : ಆದರ್ಶ ಸೇವಾ ಸಂಘದಿಂದ ಬ್ರಾಹ್ಮಣ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ತಂತ್ರಜ್ಞಾನ, ಪದವಿ, ಸ್ನಾತಕೋತ್ತರ ಕೋರ್ಸ್ ಗಳು ಸೇರಿದಂತೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಅದರಂತೆ ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ತ್ರಿಮತಸ್ಥ ಬ್ರಾಹ್ಮಣ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಪಡೆದ ಕುಟುಂಬ ವಾರ್ಷಿಕ ಆದಾಯ 3 ಲಕ್ಷ ರೂ.ಗಳ ಒಳಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಜು.12 ರಿಂದ ದಿ. 20 ಕೊನೆ ದಿನವಾಗಿದೆ, ವಿವರಗಳಿಗೆ 9480166274, 9845676773 ಅನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: