ಪ್ರಮುಖ ಸುದ್ದಿಮೈಸೂರು

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸಭೆ : ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡಗಳ ಅಳಿವು-ಉಳಿವಿನ ಬಗ್ಗೆ ಚರ್ಚೆ ಸಾಧ್ಯತೆ

ರಾಜ್ಯ(ಬೆಂಗಳೂರು),ಜೂ.28:- ಇಂದು ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಯಾಬಿನೇಟ್ ಮೀಟಿಂಗ್ ನಡೆಯಲಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮಧ್ಯಾಹ್ನದ ವೇಳೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಮೈಸೂರು ಜಿಲ್ಲೆಗೆ ಸಂಬಂಧಪಟ್ಟ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಮೈಸೂರು ನಗರದಲ್ಲಿರುವ ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡಗಳ ಅಳಿವು-ಉಳಿವಿನ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಪಾರಂಪರಿಕವಾದ ಈ ಎರಡು ಕಟ್ಟಡಗಳ ಬಗ್ಗೆ  ಮಾಹಿತಿ ಕಲೆ ಹಾಕಿ ಚರ್ಚೆ ನಡೆಸಲು ಸಚಿವ ಜಿ.ಟಿ ದೇವೇಗೌಡ ಸಿದ್ಧರಾಗಿದ್ದಾರೆ. ಜಿಲ್ಲೆಯ ನೆನಗುದಿಗೆ ಬಿದ್ದಿರುವ ಕೆರೆ- ಕಟ್ಟೆಗಳ ಅಭಿವೃದ್ಧಿ ಬಗ್ಗೆಯೂ ಸಚಿವ ಜಿ.ಟಿ.ದೇವೇಗೌಡ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ಜಿಲ್ಲೆಗೆ ಮುಂಗಾರು ಮಳೆ ಕೈಕೊಟ್ಟ ಪರಿಣಾಮವಾಗಿ ಬೆಳೆ ಪರಿಹಾರ ಬಗ್ಗೆಯೂ ಸರ್ಕಾರದ ಗಮನಕ್ಕೆ ತರಲು ಸಚಿವರು ಮುಂದಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಹತ್ತಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲು   ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸಿದ್ಧರಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: