ಕರ್ನಾಟಕ

ಶಾಸಕ ಭೀಮಾ ನಾಯಕ್ ಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು,ಜೂ.28- ಸಚಿವರ ವಿರುದ್ಧ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಶಾಸಕ ಭೀಮಾ ನಾಯಕ್ ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಭೀಮಾ ನಾಯಕ್ ಅವರಿಗೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಮುಜರಾಯಿ ಸಚಿವ ಪರಮೇಶ್ವರ ನಾಯ್ಕ್ಅವರು ಕಮಿಷನ್ ದಂಧೆ ನಡೆಸುತ್ತಿದ್ದಾರೆ. ಅವರು ನಾಲಾಯಕ್ ಎಂದು ಶಾಸಕ ಭೀಮಾ ನಾಯಕ್ ಅವರು ಟೀಕಿಸಿದ್ದರು. ಹೇಳಿಕೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲಾಗಿದೆ.

ನಿಮ್ಮ ನಡವಳಿಕ ಪಕ್ಷ ವಿರೋಧಿಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪಕ್ಷದ ತತ್ವಸಿದ್ಧಾಂತಕ್ಕೆ ವಿರುದ್ಧವಾಗಿ ಬಹಿರಂಗ ಹೇಳಿಕೆ ನೀಡಿದ್ದು, ನಿಮ್ಮ ವಿರುದ್ಧ ಶಿಸ್ತು ಕ್ರಮಮವನ್ನು ಏಕೆ ಕೈಗೊಳ್ಳಬಾರದು ಎಂದು ನೋಟಿಸ್ನಲ್ಲಿ ಪ್ರಶ್ನಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: