ಮೈಸೂರು

ಸವಾಲುಗಳನ್ನು ಎದುರಿಸಲು ಶಿಕ್ಷಣ ಅವಶ್ಯಕ : ಕೆ.ಟಿ.ಶ್ರೀಕಂಠೇಗೌಡ

ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ಉತ್ತಮ ಶಿಕ್ಷಣ ಅವಶ್ಯಕ. ಶಿಕ್ಷಣದಿಂದ ಮಾತ್ರ ಈ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಬಹುದು ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.

ಗಾಂಧಿನಗರದ ಶ್ರೀ ಶಿವಯೋಗಿಸ್ವಾಮಿ ವಿದ್ಯಾಸಂಸ್ಥೆಯ ನೂತನ ಶಾಲಾ-ಕಾಲೇಜು ಕಟ್ಟಡವನ್ನು ಶ್ರೀಕಂಠೇಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಡಾ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್‍ಕುಮಾರ್ , ನಗರ ಪಾಲಿಕೆ ಸದಸ್ಯರಾದ ಸ್ವಾಮಿ, ಕಮಲ್ ಉದಯ್, ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಸಿ.ಜಿ.ಪ್ರಭುಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: