Uncategorized

ಸರ್ಕಾರ ಅಸ್ಥಿರಗೊಳಿಸಿರುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜು.1-ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ನಿರಂತರ ಹಗಲುಗನಸು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕುಮಾರಸ್ವಾಮಿ ನ್ಯೂ ಜೆರ್ಸಿಯಿಂದ ಟ್ವಿಟ್ ಮಾಡಿದ್ದಾರೆ.

‘ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ #BJP ಯ ಪ್ರಯತ್ನ ‘ನಿರಂತರ ಹಗಲುಗನಸು’ ಎಂದಿದ್ದಾರೆ. (ಎಂ.ಎನ್)

 

Leave a Reply

comments

Related Articles

error: