ಪ್ರಮುಖ ಸುದ್ದಿಮೈಸೂರು

ಹಳ್ಳಕ್ಕೆ ಉರುಳಿದ ಬಸ್ : ವಿದ್ಯಾರ್ಥಿಗಳು ಅಪಾಯದಿಂದ ಪಾರು

ಹೆದ್ದಾರಿ ಬದಿಯ ಹಳ್ಳಕ್ಕೆ  ಶಾಲಾ ವಿದ್ಯಾರ್ಥಿಗಳಿದ್ದ ಪ್ರವಾಸದ ಬಸ್ಸೊಂದು ಉರುಳಿ  ಬಿದ್ದ  ಘಟನೆ ಶ್ರೀರಂಗಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಫನ್ ಪೋರ್ಟ್ ಬಳಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದ ಬಸ್ಸು ಹೆದ್ದಾರಿ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದ್ದು, ಮಕ್ಕಳೆಲ್ಲ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಶ್ರೀರಂಗಪಟ್ಟಣ ಡಿವೈಎಸ್ಪಿ ವಿಶ್ವನಾಥ  ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

comments

Related Articles

error: