Uncategorized

ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ನವದೆಹಲಿ,ಜು.2-ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಇಂದು ಭೇಟಿ ಮಾಡಿದರು.

ನವದೆಹಲಿಯಲ್ಲಿಂದು ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ ಉಡುಪಿಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಕೆಲವು ರಸ್ತೆಗಳ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.

ಕರಾವಳಿ ಬೈಪಾಸ್ಮಲ್ಪೆ ರಸ್ತೆ ಅಗಲೀಕರಣ, ಪರ್ಕಳದಿಂದತೀರ್ಥಹಳ್ಳಿಯವರೆಗೆ ರಸ್ತೆ ಅಭಿವೃದ್ಧಿ, ಬೇಲೂರುಚಿಕ್ಕಮಗಳೂರು ರಸ್ತೆ ಅಭಿವೃದ್ಧಿ, ಶೃಂಗೇರಿಬಾಳೆಹೊನ್ನೂರುಅಲ್ದೂರುನಾಡಿಪುರ ರಸ್ತೆ ಅಭಿವೃದ್ಧಿ, ತೀರ್ಥಹಳ್ಳಿಯಿಂದನಿಮ್ಮಾರದವರೆಗೆ ರಸ್ತೆ ಅಭಿವೃದ್ಧಿ, ಬೇಲೂರುಚಿಕ್ಕಮಗಳೂರು (ಮೂಡಿಗೆರೆಕಡೂರು ರಸ್ತೆ) ನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಹಾಗೂ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಇನ್ನಿತರ ಸಮಸ್ಯೆಗಳ ಕುರಿತು ಕೇಂದ್ರ ಸಚಿವರ ಗಮನಕ್ಕೆ ತಂದು, ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು. (ಎಂ.ಎನ್)

 

Leave a Reply

comments

Related Articles

error: