ಪ್ರಮುಖ ಸುದ್ದಿಮೈಸೂರು

ಬಿಎಸ್ ವೈ ಆರೋಪ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಯಡಿಯೂರಪ್ಪನವರ ಆರೋಪಗಳು ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಯಡಿಯೂರಪ್ಪನವರು ಸಿದ್ದರಾಮಯ್ಯನವರ ಮೇಲೆ ಆರೋಪಿಸಿದ್ದು ಆ ಕುರಿತು ಪ್ರತಿಕ್ರಿಯೆ ನೀಡಿದ ಅವರು ಯಡಿಯೂರಪ್ಪ ಮಹಾನ್ ಭಂಡ. ಅವರ ವಿರುದ್ದವೇ 15 ಕೇಸುಗಳಿವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ  ಇರುವುದರಿಂದ ಅವನ್ನೆಲ್ಲಾ ವಜಾ ಮಾಡಿಸಿಕೊಳ್ಳುತ್ತಿದ್ದಾರೆ. ಇಲ್ಲವಾಗಿದ್ದರೇ ಇಷ್ಟೋತ್ತಿಗೇ ಯಡಿಯೂರಪ್ಪ ಮತ್ತೆ ಜೈಲಿನಲ್ಲಿ ಇರಬೇಕಾಗಿತ್ತು. ಅವರಿಗೆ ನನ್ನ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ.
ನನಗೆ ಯಾವುದೇ ಆಣೆ ಪ್ರಮಾಣದಲ್ಲಿ ನಂಬಿಕೆ ಇಲ್ಲ. ನ್ಯಾಯಾಲಯದಲ್ಲಿ ದಾಖಲೆ ಕೇಳುತ್ತಾರೆಯೇ  ಹೊರತು ಪ್ರಮಾಣ ಮಾಡಿಸಿಕೊಂಡು ಕಳುಹಿಸುವುದಿಲ್ಲ. ಯಡಿಯೂರಪ್ಪ  ವಿರುದ್ದ ಕಾನೂನು ಹೋರಾಟದ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ವಾಕ್ ಪ್ರಹಾರ ನಡೆಸಿದರು.

ಈ ಸಂದರ್ಭ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮತ್ತಿತರ ಕಾಂಗ್ರೆಸ್ ಮುಖಂಡರು ಸಿಎಂ ಜೊತೆಗಿದ್ದರು.

Leave a Reply

comments

Related Articles

error: