
ಪ್ರಮುಖ ಸುದ್ದಿ
ಜುಲೈ 15 ರೊಳಗೆ ಕಬ್ಬು ಅರೆಯಲು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಕಾರ್ಖಾನೆ ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಸೂಚನೆ
ರಾಜ್ಯ(ಮಂಡ್ಯ)ಜು.3:- ಜಿಲ್ಲೆಯಲ್ಲಿ ಕಟಾವಿಗೆ ಬಂದಿರುವ ಕಬ್ಬನ್ನು ಅರೆಯುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಪುನಾರಂಭಿಸಿ ಜುಲೈ 15ರ ನಂತರ ಕಬ್ಬನ್ನು ಅರೆಯಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ನಿನ್ನೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ಕಬ್ಬಿನ ಬಾಕಿ ಹಣವನ್ನು ಪಾವತಿಸುವ ಸಂಬಂಧ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಿಂದ ಬಾಕಿ ಇರುವ ರೂ 27 ಕೋಟಿ ಹಣವನ್ನು ಪಾವತಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಎರಡು ಹಂತದಲ್ಲಿ ಅಂದರೆ ಬರುವ ಶನಿವಾರ ರೂ 10 ಕೋಟಿ ಹಾಗೂ ಮುಂಬರುವ ಶನಿವಾರ 10 ಕೋಟಿ ರೂ. ಹಣವನ್ನು ಪಾವತಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳು ಜುಲೈ 15 ನಂತರ ಕಬ್ಬನ್ನು ಅರೆಯಲು ಸಮ್ಮತಿಸಿದರು.
ಜುಲೈ ಕೊನೆಯ ವಾರ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಉಪನಿರ್ದೆಶಕರಾದ ಹೇಮಲತಾ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)