ಪ್ರಮುಖ ಸುದ್ದಿಮೈಸೂರು

ಮೇಟಗಳ್ಳಿಯಲ್ಲಿ ನಿರ್ಮಿಸುತ್ತಿರುವ ನೂತನ ಜಿಲ್ಲಾಸ್ಪತ್ರೆಗೆ ಸಚಿವ ಜಿ.ಟಿ.ದೇವೇಗೌಡ ಭೇಟಿ : ಶೀಘ್ರವಾಗಿ ಪೂರ್ಣಗೊಳಿಸುವಂತೆ ತಾಕೀತು

ಮೈಸೂರು,ಜು.3:- ಮೈಸೂರು ನಗರ ಚಾಮರಾಜ ಕ್ಷೇತ್ರದ ಮೇಟಗಳ್ಳಿಯಲ್ಲಿ  ನಿರ್ಮಿಸುತ್ತಿರುವ ನೂತನ ಜಿಲ್ಲಾಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭ ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೇರಿದಂತೆ ಅಧಿಕಾರಿಗಳು ಸಚಿವರ ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: