ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮ ಫಲಕಕ್ಕೆ ಚಪ್ಪಲಿ ತೂಗಿ ಬಿಟ್ಟ ಕಿಡಿಗೇಡಿಗಳು : ಪ್ರತಿಭಟನೆ

ಮೈಸೂರು,ಜು.5:-  ಸಂವಿಧಾನ‌ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮ ಫಲಕಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆಂದು ಆರೋಪಿಸಿ ಮೈಸೂರಿನ ಎಚ್.ಡಿ.ಕೋಟೆ ಸರಗೂರು ತಾಲೂಕಿನ ಸಾಗರೆ ಗ್ರಾಮದಲ್ಲಿ‌ ಜನತೆ ಪ್ರತಿಭಟನೆ ನಡೆಸಿದರು.

ಅಲ್ಲಿರುವ ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳ್ಯಾರೋ ಚಪ್ಪಲಿ ತೂಗಿ ಬಿಟ್ಟಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ‌ ರಾತ್ರಿ‌ ಕಿಡಿಗೇಡಿಗಳು ಕೃತ್ಯ ನಡೆಸಿದ್ದು,  ಇಂದು ಮುಂಜಾನೆ ದಾರಿ ಹೋಕರ ಕಣ್ಣಿಗೆ  ಈ ದೃಶ್ಯ ಬಿದ್ದಿದೆ.  ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: