ಮೈಸೂರು

ಡಾ.ಬಾಬು ಜಗಜೀವನರಾಮ್ ಅವರ 33 ನೇ ವರ್ಷದ ಪುಣ್ಯ ಸ್ಮರಣೆ : ಮಾಲಾರ್ಪಣೆಗೈದು ಗೌರವ ಸಮರ್ಪಿಸಿದ ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಜು.6:- ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ  ಡಾ.ಬಾಬು ಜಗಜೀವನರಾಮ್ ಅವರ 33 ನೇ ವರ್ಷದ ಪುಣ್ಯ ಸ್ಮರಣೆ ದಿನದ ಆಚರಣೆ ಅಂಗವಾಗಿ ರೈಲ್ವೆ ನಿಲ್ದಾಣದ ಬಳಿ ಇರುವ ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಅರ್ಪಿಸಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು  ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ,  ಪುಷ್ಪಾರ್ಚನೆ ಗೈದು ಗೌರವ ಅರ್ಪಿಸಿದರು. ಈ ಸಂದರ್ಭ ಮೇಯರ್ ಪುಷ್ಪಲತಾ ಜಗನ್ನಾಥ್, ಉಪಮೇಯರ್ ಶಫಿ ಅಹ್ಮದ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್,   ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಸಿಇಒ ಕೆ.ಜ್ಯೋತಿ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: