ಕರ್ನಾಟಕ

ಭಾರೀ ಮಳೆ: ಮೂಡಿಗೆರೆ ಶಾಲಾ, ಕಾಲೇಜುಗಳಿಗೆ ರಜೆ

ಚಿಕ್ಕಮಗಳೂರು,ಜು.6-ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಮಡಿಕೇರಿಯಲ್ಲೂ ಮಳೆ ವಿಪರೀತವಾಗಿದೆ.

ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಡಳಿತ ಮೂಡಿಗೆರೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ.

ಶುಕ್ರವಾರ ಒಂದು ದಿನ ಸುರಿದ ಮಳೆಗೆ ಮಡಿಕೇರಿಮಂಗಳೂರು ಹೆದ್ದಾರಿಯ ಮದೆನಾಡು ಬಳಿ ರಸ್ತೆ ಕುಸಿದಿದ್ದು, ಜನ ಆತಂಕಗೊಂಡಿದ್ದಾರೆ. ಬಾರಿಯೂ ಜಲಪ್ರಳಯವಾಗುತ್ತಾ ಅನ್ನೋ ಆತಂಕ ಎದುರಾಗಿದೆ. ಭಾಗಮಂಡಲದ ತ್ರೀವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.

ಕೊಡಗಿನಲ್ಲಿ ಬಾರಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಇಷ್ಟು ದಿನದವರೆಗೆ ಮಳೆನೇ ಇರಲಿಲ್ಲ. ಹೀಗಾಗಿ ಮಳೆ ಬರಲಿ ಎಂದು ಹೋಮಹವನವೂ ನಡೆಯಿತು. ಬೆನ್ನಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಳೆ ಇಲ್ಲದೆ ಕಂಗಾಲಾಗಿ ಹೋಗಿದ್ದ ಜನರಿಗೆ ಮತ್ತೆ ಆತಂಕ ಶುರುವಾಗಿದೆ. (ಎಂ.ಎನ್)

Leave a Reply

comments

Related Articles

error: