ಮೈಸೂರು

ಆದಾಯ ಮಿತಿ 5 ಲಕ್ಷ ಹೆಚ್ಚಳಕ್ಕೆ ಮುಂದಾಗಿರುವುದು ಸ್ವಾಗತಾರ್ಹ

ಮೈಸೂರು,ಜು.6:- ಕೇಂದ್ರ ಬಜೆಟ್‌ ಕುರಿತಂತೆ ಹಲವರು ತಮ್ಮ ಪ್ರತಿಕ್ರಿಯೆಯನ್ನು ಈಗಾಗಲೇ ವ್ಯಕ್ತಪಡಿಸಿದ್ದಾರೆ.

ಆದಾಯ ಮಿತಿ  5 ಲಕ್ಷ ಹೆಚ್ಚಳಕ್ಕೆ ಮುಂದಾಗಿರುವುದು ಸ್ವಾಗತಾರ್ಹ ಎಂದು ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಇದರಿಂದ ವಿದ್ಯಾರ್ಥಿಗಳಿಂದ ಹಿಡಿದು ಸಾಮಾನ್ಯ ಜನತೆಗೆ ಅನುಕೂಲವಾಗುತ್ತದೆ. ಸಾಮಾನ್ಯ ಜನರನ್ನು ಮನಸ್ಸಿನಲ್ಲಿಟ್ಟುಕೊಂಡು ಆದಾಯ ಮಿತಿ ಏರಿಸಿರುವುದು ಆಶಾದಾಯಕ ಬೆಳವಣಿಗೆ. ಆದರೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುವುದು ಜನಸಾಮಾನ್ಯರ ಮೇಲೂ ಪರಿಣಾಮ ಬೀರುತ್ತದೆ. ಜೊತೆಗೆ ಚಿನ್ನಾಭರಣಗಳ ಬೆಲೆ ಹೆಚ್ಚಳವಾಗುವುದು ಸಹ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದಿದ್ದಾರೆ.

ಕೇಂದ್ರದ ಬಜೆಟ್ ಸಣ್ಣ  ಉದ್ಯಮಿಗಳಿಗೆ ಪೂರಕವಾಗಿದೆ .ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಿರುವುದು ಸ್ವಾಗತಾರ್ಹ. 5ಲಕ್ಷವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಿರುವುದು ಮಧ್ಯಮ ಕುಟುಂಬಗಳಿಗೆ ಸಹಾಯವಾಗಲಿದೆ .ನವೋದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ. ಸೋಲಾರ್ ಎನರ್ಜಿ ಮತ್ತು ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯ ನೀಡಿರುವುದರಿಂದ ಗ್ರೀನ್ ಬಜೆಟ್ ಎನ್ನಬಹುದು ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: