ದೇಶ

ಅಸ್ಸಾಂ: ವಿಷ ಪ್ರಸಾದ ಸೇವಿಸಿ 150 ಮಂದಿ ಅಸ್ವಸ್ಥ

ರಾಂಗೈ,ಜು.8- ವಿಷ ಪ್ರಸಾದ ಸೇವಿಸಿ ಮಂದಿ ಅಸ್ವಸ್ಥರಾಗಿರುವ ಘಟನೆ ಅಸ್ಸಾಂ ರಾಜ್ಯದ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಗುವಾಹಟಿ ಬಳಿ ಲೆಂಗಾ ಹಳ್ಳಿ ಬಳಿ ಈ ಘಟನೆ ನಡೆದಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಈ ದುರ್ಘಟನೆ ನಡೆದಿದೆ.

ಪ್ರಸಾದ ಸೇವಿಸಿದ ಬಳಿಕ ಹೊಟ್ಟೆನೋವು, ವಾಂತಿ, ಬೇದಿ ಕಾಣಿಸಿಕೊಂಡಿದ್ದು, ಅಮಂಗಾನ್ ಸರ್ಕಾರಿ ಆಸ್ಪತ್ರೆಗೆ 150 ಮಂದಿಯನ್ನು ದಾಖಲಿಸಲಾಗಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಗುವಾಹಟಿಯ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಲಾಗಿದೆ.

ಆಸ್ಪತ್ರೆಯಲ್ಲಿರುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಎಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: