Uncategorized

ನಾವು ಯಾವುದೇ ತ್ಯಾಗಕ್ಕೂ ರೆಡಿ : ಸಚಿವ ಡಿ.ಕೆ ಶಿವಕುಮಾರ್

ರಾಜ್ಯ(ಬೆಂಗಳೂರು)ಜು.8:- 13 ಮಂದಿ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ಪಕ್ಷದ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಈ ನಡುವೆ ಇಂದು ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಉಪಹಾರ ಕೂಟ ಏರ್ಪಡಿಸಿ ಚರ್ಚಿಸಿ ಕಾಂಗ್ರೆಸ್ ಎಲ್ಲಾ ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಲಾಗಿತ್ತು. ಉಪಹಾರ ಕೂಟದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ಸಮ್ಮಿಶ್ರ ಸರ್ಕಾರದ  ಹಿತದೃಷ್ಟಿಯಿಂದ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ. ಸರ್ಕಾರ ಹಾಗೂ ಸಿಎಂ ಕೈ ಬಲಪಡಿಸುತ್ತೇವೆ ಎಂದು ತಿಳಿಸಿದ್ದಾರೆ.  ಬೇರೆಯವರಿಗೆ ಸಚಿವ ಸ್ಥಾನ ನೀಡಲು ಮುಂದಾಗಿದ್ದೇವೆ. ಬೇರೆಯವರಿಗೆ ಹಾದಿ ಮಾಡಿಕೊಳ್ಳಲು ನಾವು ಸಿದ್ಧರಿದ್ದೇವೆ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೂ ರೆಡಿ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: