ಸುದ್ದಿ ಸಂಕ್ಷಿಪ್ತ

ನಾಳೆ ಪಠ್ಯ ಚಟುವಟಿಕೆಗಳ ಉದ್ಘಾಟನೆ

ಮೈಸೂರು,ಜು.8 : ಮಹಾರಾಜ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಜು.9ರಂದು ಬೆಳಗ್ಗೆ 10 ಗಂಟೆಗೆ ಕೃಷ್ಣರಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಎಲ್.ನಾಗೇಂದ್ರ ಚಾಲನೆ ನೀಡುವರು, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎನ್.ರತ್ನ ಅಧ್ಯಕ್ಷತೆ ವಹಿಸುವರು, ಜನಪದ ವಿದ್ವಾಂಸ ಪ್ರೊ.ಪಿ.ಕೆ.ರಾಜಶೇಖರ್, ನಿವೃತ್ತ ಪ್ರಾಧ್ಯಾಪಕರಾದ ಕೆ.ಎಂ.ದೇವಿಪ್ರಸಾದ್, ಹೆಚ್.ಡಿ.ಕಮಲಾಮೂರ್ತಿ ಹಾಗೂ ಸಂಶೋದಕ ಅಮ್ಮ ರಾಮಚಂದ್ರ ಇವರುಗಳು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: