ಪ್ರಮುಖ ಸುದ್ದಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಭೇಟಿಯಾಗಿ ಸ್ಪೀಕರ್ ನಿರ್ಧಾರ ಕುರಿತು ಚರ್ಚೆ ನಡೆಸಿದ ಸಿಎಂ

ರಾಜ್ಯ(ಬೆಂಗಳೂರು)ಜು.9:- ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರಿಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಭೇಟಿಯಾಗಿ ಸ್ಪೀಕರ್ ನಿರ್ಧಾರ ಕುರಿತು ಚರ್ಚೆ ನಡೆಸಿದ್ದಾರೆ.

ನಗರದ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧಾರದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಸ್ಪೀಕರ್ ನಿರ್ಧಾರದ ಬಳಿಕ ಅತೃಪ್ತ ಶಾಸಕರ ಉಚ್ಛಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರಾದ ಹೆಚ್.ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಮೂವರ ವಿರುದ್ಧ ಸ್ಪೀಕರ್ ಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ. ಅಲ್ಲದೆ ಮೂವರು ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: