ಪ್ರಮುಖ ಸುದ್ದಿ

ಮೈತ್ರಿ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ : ಕೆ.ಆರ್​.ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡ

ದೇಶ(ಮುಂಬೈ)ಜು.9:-  ಅತೃಪ್ತ ಕಾಂಗ್ರೆಸ್‌ ಶಾಸಕರ ವಿರುದ್ಧ ಅನರ್ಹತೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಕಾಂಗ್ರೆಸ್‌ ನಾಯಕರು ಎಚ್ಚರಿಕೆ ನೀಡಿದ್ದರೂ,   ಅತೃಪ್ತ ಶಾಸಕರು ಯಾವುದಕ್ಕೂ ಜಗ್ಗುವುದಿಲ್ಲ, ರಾಜೀನಾಮೆ ಹಿಂಪಡೆಯುವ ಮಾತಿಲ್ಲ ಎಂದು ಹೇಳಿದ್ದಾರೆ.

ಕೆ.ಆರ್​.ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡ ಮಾಧ್ಯಮಗಳೊಂದಿಗೆ ಮಾತನಾಡಿ, ಮೈತ್ರಿ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಅಭಿವೃದ್ಧಿ ಕಾರ್ಯಗಳಾಗಿಲ್ಲ ಎಂದು ಅಸಮಾಧಾನಗೊಂಡು, ಜೆಡಿಎಸ್​ನ ಮೂವರು ಕಾಂಗ್ರೆಸ್‌ನ 11 ಶಾಸಕರು ರಾಜೀನಾಮೆ ನೀಡಿದ್ದಾರೆ. ನಾವು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ.

ಅಭಿವೃದ್ಧಿ ಕೊರತೆಯಿಂದಾಗಿ ರಾಜೀನಾಮೆ ನೀಡಿದ್ದೇವೆ. ಕರ್ನಾಟಕ ಮುಖ್ಯಮಂತ್ರಿಗಳು ಶಾಸಕರೊಂದಿಗೆ ಸಮಾಲೋಚನೆ ನಡೆಸದೆಯೇ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಇಲ್ಲಿ ನಾವು ಎರಡು ದಿನ ತಂಗಿದ್ದು, ಬಳಿಕ ಹಿಂದಿರುಗುತ್ತೇವೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: