ಸುದ್ದಿ ಸಂಕ್ಷಿಪ್ತ

ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ : ಖಂಡನೆ

ಮೈಸೂರು,ಜು.9 : ಹೆಚ್.ಡಿ.ಕೋಟೆ ತಾಲ್ಲೂಕಿನ ಸಾಗರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಡಿರುವ ಅವಮಾನವನ್ನು ಮೈಸೂರು ನಗರ ಆದಿ ಕರ್ನಾಟಕ ಮಹಾಸಂಸ್ಥೆಯು ಬಲವಾಗಿ ಖಂಡಿಸಿದೆ.

ಈ ಘಟನೆಯ ಹಿಂದಿರುವ ದುಷ್ಟರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಅಧ್ಯಕ್ಷ ಸಿ.ವಿಜಯ್ ಕುಮಾರ್, ಕಾರ್ಯದರ್ಶಿ ಎಂ.ಗಂಗಾಧರ್ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: