ಮೈಸೂರು

ಒಕ್ಕಲಿಗ ಸಮುದಾಯದ ನಾಯಕರಿಗೆ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಪ್ರತಿಭಟನೆ

ಮೈಸೂರು,ಜು.10:- ಒಕ್ಕಲಿಗ ಸಮುದಾಯದ ನಾಯಕರಿಗೆ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಒಕ್ಕಲಿಗರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾ ಪಂಚಾಯತ್ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಕಪ್ಪು ಪಟ್ಟಿ ಧರಿಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ದಿನದಿಂದಲೂ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಸುಗಮವಾಗಿ ಆಡಳಿತ ನಡೆಸಲು ಅವಕಾಶ ನೀಡುತ್ತಿಲ್ಲ. ರಾಜ್ಯದ ಜನತೆ ಅವರು ಆಡಳಿತ ನಡೆಸುವುದು ಬೇಡ ಎಂದು ಲೆಟರ ಹೆಡ್ ಬರೆದು ಪತ್ರವನ್ನೇನಾದರೂ ಕೊಟ್ಟಿದ್ದಾರಾ? ಇಲ್ಲವಲ್ಲ. ಮತ್ತೆ ಯಾಕೆ ನೀವು ಅವರಿಗೆ ಆಡಳಿತ  ನಡೆಸಲು ಬಿಡುತ್ತಿಲ್ಲ. ನೀವುಗಳೇ ಯಾಕೆ ಆಪರೇಷನ್ ಕಮಲ ನಡೆಸುತ್ತ 40ಕೋಟಿ ಹಣವನ್ನು ನೀಡಿ ಶಾಸಕರನ್ನು ಖರೀದಿಸುತ್ತಿದ್ದೀರಿ, ನಿಮಗೆ ಅಷ್ಟೊಂದು ಹಣ ಎಲ್ಲಿಂದ ಬರುತ್ತದೆ, ನಿಮ್ಮಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಕ್ಕಲಿಗ ಸಮುದಾಯದವರು ಶಾಂತಿ ಪ್ರಿಯರು. ಒಕ್ಕಲಿಗ ಸಮುದಾಯದವರು ಅಧಿಕಾರಕ್ಕೆ ಬಂದಾಗಲೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳಗಳು ನಡೆಯುತ್ತಲೇ ಇವೆ. ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ಸದಸ್ಯ ಸತೀಶ್ ಗೌಡ, ಕಾಂತರಾಜು, ಬಸವರಾಜು, ಗಿರೀಶ್, ಪ್ರಸನ್ನಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: