ಮೈಸೂರು

ಉದ್ಯಮ ಕ್ಷೇತ್ರದಲ್ಲಿ ಮುಂದುವರಿಯಲು ಪ್ರಯತ್ನಿಸಿ : ಸುಧಾಕರ್ ಶೆಟ್ಟಿ

ಬ್ಯಾಂಕುಗಳು ಕೈಗಾರಿಕೆಗಳಿಗಾಗಿ ನೀಡುವ ಸಾಲ ಸೌಲಭ್ಯವನ್ನು ಸರಿಯಾಗಿ ಉಪಯೋಗಿಸಿಕೊಂಡು ಉದ್ಯಮ ಕ್ಷೇತ್ರದಲ್ಲಿ ಮುಂದುವರಿಯಬೇಕು ಎಂದು ಎಫ್.ಕೆ.ಸಿ.ಸಿ.ಐ ಉಪಾಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ತಿಳಿಸಿದರು.

ಮೈಸೂರಿನ ಇಂಜಿನಿಯರುಗಳ ಸಂಸ್ಥೆ ಸಭಾಂಗಣದಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಮೈಸೂರು ಜಿಲ್ಲೆಯ ಕೈಗಾರಿಕಾ ಸಂಘಗಳ ಆಶ್ರಯದಲ್ಲಿ  ಕೈಗಾರಿಕೋದ್ಯಮಿಗಳು ಮತ್ತು ವಾಣಿಜ್ಯೋದ್ಯಮಿಗಳು ಹಾಗೂ ಭಾವಿ ರಫ್ತುದಾರರಿಗೆ 6ದಿನಗಳ ಕಾಲ ಹಮ್ಮಿಕೊಳ್ಳಲಾದ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೇರವೇರಿಸಿ ಮಾತನಾಡಿದರು.

ಇಂದು ಕೈಗಾರಿಕೋದ್ಯಮ ಬೃಹತ್ತಾಗಿ ಬೆಳೆಯುತ್ತಿದೆ. ಸರ್ಕಾರದಿಂದ ಸಾಲ ಸೌಲಭ್ಯಗಳು ಲಭಿಸುತ್ತಿವೆ. ಎಲ್ಲವನ್ನೂ ಜನತೆ ಸರಿಯಾಗಿ ತಿಳಿದುಕೊಳ್ಳಬೇಕು. ಸಣ್ಣ ಕೈಗಾರಿಕೆಗಳಿಗೆ ಇಂದು ಹೆಚ್ಚಿನ ಮಹತ್ವ ಸಿಗುತ್ತಿದ್ದು, ಎಲ್ಲರೂ ತೊಡಗಿಸಿಕೊಳ್ಳುತ್ತಿದ್ದಾರೆ. ನಾವು ಯಾವುದೇ ಉತ್ಪಾದನೆಯನ್ನು ಜನರಿಗೆ ತಲುಪಿಸಲು ಮುಕ್ತ ಮನಸ್ಸಿನಿಂದ ಜನತೆಗೆ ಅದನ್ನು ತಿಳಿಸಿಕೊಡಬೇಕು. ಹಾಗೆ ಮಾಡಿದಲ್ಲಿ ಉತ್ಪಾದನೆಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದರು.

ಇದು ಐದನೇ ಶಿಬಿರವಾಗಿದ್ದು, ಮೂವತ್ತಮೂರು ಜನರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ಉದ್ಯಮವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕು, ಯಾವ ರೀತಿ ಜನತೆಯನ್ನು ಸೆಳೆಯಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಹೆಚ್.ರಾಮಕೃಷ್ಣೇಗೌಡ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎ.ಎಸ್.ಸತೀಶ್, ಹೆಬ್ಬಾಳು ಕೈಗಾರಿಕೋದ್ಯಮಿಗಳ ವಸಾಹತು ತಯಾರಕರ ಸಂಘದ ಅಧ್ಯಕ್ಷ ಎನ್.ಹೆಚ್.ಜಯಂತ್, ಇಂಜಿನಿಯರುಗಳ ಸಂಸ್ಥೆಯ ಅಧ್ಯಕ್ಷ ಎಂ.ಚಿನ್ನಸ್ವಾಮಿ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ ಶೈಲರಾಮಣ್ಣವರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: