ಮೈಸೂರು

ಗುರಿಮುಟ್ಟಲುಬೇಕಾದ ಅಧ್ಯಯನ ಹಾಗೂ ನಿರಂತರ ಪ್ರಯತ್ನ ಇರಬೇಕು ಆಗ ಮಾತ್ರ ತಮ್ಮ ಫಲ ದೊರೆಯಲಿದೆ :ವಿಶ್ವನಾಥ್ ಶೇಷಾಚಲ

ಮೈಸೂರು, ಜು.11:- ನಗರದ ದಟ್ಟಗಳ್ಳಿಯಲ್ಲಿರುವ ಎಸ್‍ವಿಜಿ ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ಪಿಯುಸಿ ವಿಜ್ಞಾನದ ವಿದ್ಯಾರ್ಥಿಗಳಿಗೆ ನೀಟ್, ಜೆಇಇ ಹಾಗೂ ಸಿಇಟಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿಯಾದ ವಿಶ್ವನಾಥ್ ಶೇಷಾಚಲರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳವ ಪ್ರತಿಯೊಬ್ಬ ವಿದ್ಯಾರ್ಥಿಯು ಮೊದಲು ತಮ್ಮ ಸಾಮರ್ಥ್ಯವನ್ನು ತಿಳಿದುಕೊಂಡು ನಾನು ನೀಟ್, ಜೆಇಇ, ಅಥವಾ ಸಿಇಟಿ ಇವುಗಳಲ್ಲಿ ಯಾವ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂಬುದನ್ನು ನಿರ್ಧರಿಸಿ, ಆಯ್ಕೆಮಾಡಿಕೊಳ್ಳಬೇಕು ಎಂದು ಹೇಳಿದರು.
ಇಂದು ರಾಷ್ಟ್ರಮಟ್ಟದಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳಾದ ನೀವು ಯಾರೊಂದಿಗೂ ತಮ್ಮನ್ನು ಹೋಲಿಕೆ ಮಾಡಿಕೊಳ್ಳದೆ, ತಾವಾಗಿಯೇ ಒಂದು ಗುರಿಯಿಟ್ಟು ಆ ಗುರಿಮುಟ್ಟಲುಬೇಕಾದ ಅಧ್ಯಯನ ಹಾಗೂ ನಿರಂತರ ಪ್ರಯತ್ನ ಇರಬೇಕು ಆಗ ಮಾತ್ರ ತಮ್ಮ ಪ್ರಯತ್ನಕ್ಕೆ ತಕ್ಕ ಫಲ ದೊರೆಯುವಂತದ್ದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು.
ನೀಟ್, ಜೆಇಇ ಮತ್ತು ಸಿಇಟಿಯಲ್ಲಿ ಉತ್ತಮ ರ್ಯಾಂಕ್‍ನ್ನು ಪಡೆದುಕೊಂಡರೆ ಸರ್ಕಾರಿ ಮೀಸಲಾತಿಯಲ್ಲಿ ನಿಮ್ಮ ಇಷ್ಟದ ಮತ್ತು ಬಹುಬೇಡಿಕೆಯ ವೃತ್ತಿಪರ ಕೋರ್ಸ್‍ಗಳನ್ನು ಆಯ್ಕೆಮಾಡಿಕೊಂಡು ಕಡಿಮೆ ಖರ್ಚಿನಲ್ಲಿ ನಿಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ನೀಟ್, ಜೆಇಇ ಮತ್ತು ಸಿಇಟಿಯಲ್ಲಿ ಯಶಸ್ವಿಯಾಗಬೇಕಾದರೆ ಅತ್ಯತ್ತಮ ತರಬೇತಿ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ ಎಂಬುದನ್ನು ಮನಗಂಡು ನಾವು ನಮ್ಮ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ, ಕಳೆದ ನಾಲ್ಕು ವರ್ಷಗಳಿಂದ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿದ್ದೇವೆ. ತಾವೆಲ್ಲರೂ ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವೇದಿಕೆಯಲ್ಲಿ ಕಾಲೇಜಿನ ಖಜಾಂಚಿ ಎಸ್.ಮನೋಹರ್, ಆಡಳಿತಾಧಿಕಾರಿ ಡಾ.ಕೆಂಪೇಗೌಡ, ಪ್ರಾಂಶುಪಾಲರಾದ ರಚನ್ ಅಪ್ಪಣಮಯ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮೋಹನ ಕುಮಾರ, ನೀಟ್, ಜೆಇಇ ತರಬೇತಿ ಕಾರ್ಯಗಾರದ ಸಂಯೋಜಕ ಪ್ರದೀಪ್ ಡಿ’ಕುನ್ಹಾ, ಉಪನ್ಯಾಸಕರಾದ ಹೇಮಂತ್ ಕುಮಾರ್, ಅಮೂಲ್ಯ, ಭಾರ್ಗವಿ ನಾಯಕ್ ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: