ಪ್ರಮುಖ ಸುದ್ದಿ

ನಾಗರಿಕ ಸೇವಾ ವೃತ್ತಿ ಆಯ್ಕೆಗೆ ಆದ್ಯತೆ ನೀಡಿ : ಡಾ.ಡಿ.ಅಪೂರ್ವ ಕರೆ

ರಾಜ್ಯ(ಮಡಿಕೇರಿ) ಜುಲೈ 13 – ತಮ್ಮ ವೃತ್ತಿ ಜೀವನದ ಕನಸುಗಳ ಸಾಕಾರಕ್ಕಾಗಿ ವಿದ್ಯಾರ್ಥಿಗಳು ಸೂಕ್ತ ತೀರ್ಮಾನವನ್ನು ವಿದ್ಯಾರ್ಥಿಗಳಿರುವಾಗಲೇ ಕೈಗೊಂಡರೆ ನಿರ್ದಿಷ್ಟ ಗುರಿ ಸಾಧನೆ ಸುಲಭಸಾಧ್ಯ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರೊಫೆಸರ್ ಡಾ. ಡಿ. ಅಪೂರ್ವ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಯೂತ್ ರೆಡ್ ಕ್ರಾಸ್ ವತಿಯಿಂದ ಆಯೋಜಿತ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿದ ಡಾ.ಡಿ. ಅಪೂರ್ವ, ನಾಗರಿಕ ಸೇವೆಯಂಥ ವೃತ್ತಿಗೆ ಆಯ್ಕೆಯಾಗಲು ಸೂಕ್ತ ತರಬೇತಿ ಅಗತ್ಯವಿದ್ದು, ಪಿಯುಸಿ ಹಂತದಲ್ಲಿಯೇ ವಿದ್ಯಾರ್ಥಿಗಳು ತಮ್ಮವೃತ್ತಿಯ ಆಯ್ಕೆಯ ಬಗ್ಗೆ ಸ್ಪಷ್ಟತೆ ತೋರಿದ್ದಲ್ಲಿ ಉತ್ತಮ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯ ಎಂದರು.

ಕೊಡಗು ಜಿಲ್ಲಾ ರೆಡ್ ಕ್ರಾಸ್ ಸಭಾಧ್ಯಕ್ಷ ಬಿ.ಕೆ.ರವೀಂದ್ರರೈ ಮಾತನಾಡಿ, ಕಾಲೇಜುಗಳಲ್ಲಿಯೇ ವಿದ್ಯಾರ್ಥಿ ಗಳಿಗೆ ಸೂಕ್ತವಾದ ವೃತ್ತಿ ಮಾರ್ಗದರ್ಶನ ಅಗತ್ಯವಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನವಾಗುತ್ತದೆ ಎಂದರಲ್ಲದೇ ವೈದ್ಯಕೀಯ ಸಂಸ್ಥೆಯ ಯೂತ್ ರೆಡ್ ಕ್ರಾಸ್ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದೂ ಶ್ಲಾಘಿಸಿದರು.

ಎಚ್. ಆರ್.ಮುರಳೀಧರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಾಯಕ ಪ್ರೊಫೆಸರ್ ಡಾ.ಎಂ. ವೀಣಾ, ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ವಿಜಯ, ಉಪನ್ಯಾಸಕರಾದ ಸೋನಾ ನಾಣಯ್ಯ , ಚಿದಾನಂದ್ ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: