ಕರ್ನಾಟಕಪ್ರಮುಖ ಸುದ್ದಿ

ಜುಲೈ 16 : ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ

ರಾಜ್ಯ(ಮಂಡ್ಯ)ಜು.16:-  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 16ರಂದು ಬೆಳಿಗ್ಗೆ 11  ಗಂಟೆಗೆ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ ಸಿಎಸ್ ಪುಟ್ಟರಾಜು ಅವರು ನಡೆಸಿಕೊಡಲಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಶ್ರೀನಿವಾಸು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಾರಿಗೆ ಸಚಿವರಾದ ಡಿಸಿ ತಮ್ಮಣ್ಣ ಅವರು ಕಾರ್ಯಕ್ರಮದಲ್ಲಿ  ಘನಉಪಸ್ಥಿತಿ ವಹಿಸುವರು. ಅಂದು ಬೆಳಿಗ್ಗೆ 9.30 ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಿಂದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ಅಲಂಕೃತ ಭಾವಚಿತ್ರದ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಲಾಮಂದಿರದಲ್ಲಿ ಸಮಾವೇಶಗೊಳ್ಳುವುದು.  ಗೌಡಗೆರೆ ನವೀನ್ ಕುಮಾರ್ ಮತ್ತು ತಂಡವರಿಂದ ಗಾಯನ ಕಾರ್ಯಕ್ರಮ ಮತ್ತು ಬೆಂಗಳೂರು  ಬಸವ ಧರ್ಮ ಪೀಠದ ಶ್ರೀದೇವಿ ಕೊಡೆಕಲ್ ಅವರು ಉಪನ್ಯಾಸ ನೀಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: