
ಮೈಸೂರು
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ : ಸಂವಾದ ನಡೆಸಿದ ಅಜಿತ್ ಕುಲಕರ್ಣಿ
ಮೈಸೂರು,ಜು.16:- ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆ ಏರ್ಪಡಿಸಿದ್ದ 2019ರ ಐಎಎಸ್ ಮತ್ತು ಕೆಎಎಸ್ ಮತ್ತು ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದಲ್ಲಿ ಶ್ರೀಚಾಮರಾಜೇಂದ್ರ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿಯವರು ನಿನ್ನೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭ ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾಲಯದ ಪರಿಸರ ಅದ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಜೆ.ಎಸ್,ಚಂದ್ರಶೇಖರ್, ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ಶೃತಿ ಚೇತನ್ ಮತ್ತು ಪ್ರೊ.ವಿಜಯ್, ಪ್ರೊ.ಕೃ.ಪ.ಗಣೇಶ್, ಜೈನಹಳ್ಳಿ ಸತ್ಯನಾರಾಯಣ್ ಗೌಡ ಸೇರಿದಂತೆ ಹಲವರು ಹಾಜರಿದ್ದರು. (ಎಸ್.ಎಚ್)