ಮೈಸೂರು

ಶೈಕ್ಷಣಿಕ ವರ್ಷ ಪ್ರಾರಂಭದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಪೂರಕ ಕಾರ್ಯಾಗಾರ : ಎನ್.ಸ್ವಾಮಿ

ಮೈಸೂರು,ಜು.16:- ತಾಲೂಕಿನ ಎಲ್ಲ ವಿಷಯ ಶಿಕ್ಷಕರಿಗೆ ಶೈಕ್ಷಣಿಕ ವರ್ಷ ಪ್ರಾರಂಭದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಪೂರಕವಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎನ್.ಸ್ವಾಮಿ ಹೇಳಿದರು.

ಅವರು ನಿನ್ನೆ ತಿ.ನರಸೀಪುರ ಪಟ್ಟಣದ ಸೆಂಟ್ ಮೇರಿಸ್ ವಿದ್ಯಾಸಂಸ್ಥೆಯಲ್ಲಿ ಗಣಿತ ಶಿಕ್ಷಕರಿಗೆ ಏರ್ಪಡಿಸಿದ್ದ ಸಮಾಲೋಚನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲ ವಿಷಯಗಳ ಶಿಕ್ಷಕರಿಗೂ ಹಂತ ಹಂತವಾಗಿ ಕಾರ್ಯಾಗಾರ ನಡೆಯಲಿದೆ. ಆಯಾ ಶಾಲೆಗಳಿಗೆ ಸಂಬಂಧಿಸಿದಂತೆ ಫಲಿತಾಂಶ ಹಿನ್ನಡೆ ಅಥವಾ ಸಾಧನೆಗಳ ಬಗ್ಗೆ ವಿಷಯ ಶಿಕ್ಷಕರಿಂದ ಮಾಹಿತಿ ಸಂಗ್ರಹಿಸಲಿದೆ, ಅಗತ್ಯ ಕ್ರಮಗಳ ಚರ್ಚೆ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಶಿಕ್ಷಕರು ವಿದ್ಯಾರ್ಥಿಗಳ ಪ್ರಗತಿಗೆ ಪೂರಕವಾಗಿ ಕ್ರಿಯಾಯೋಜನೆ ಮಾಡಿಕೊಳ್ಳಲು ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಪಾಲಕರ ಸಭೆ ನಡೆಸಬೇಕು. ಬೆಳಿಗ್ಗೆ ಮತ್ತು ಸಂಜೆ ವಿಶೇಷ ತರಗತಿ ನಡೆಸಬೇಕು. ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ವಾತವರಣ ಸೃಷ್ಟಿಸಿ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ಶಿಕ್ಷಕರಾದ ವೈದ್ಯನಾಥನ್, ಎಂ.ವಿ.ಮಹದೇವಸ್ವಾಮಿ, ಜಗದೀಶ್ ಅವರು ಪರೀಕ್ಷಾ ವಿಧಾನಗಳ ಕುರಿತು ಮಾರ್ಗದರ್ಶನ ನೀಡಿದರು.

ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಿನ್ನಸ್ವಾಮಿ, ಶಿಕ್ಷಣ ಸಂಯೋಜಕ ವಿಶ್ವನಾಥರೆಡ್ಡಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಸೆಂಟ್ ಮೇರಿಸ್ ವಿದ್ಯಾಸಂಸ್ಥೆಯ ಕರುಣೇಶ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: