ಮೈಸೂರು

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಇಬ್ಬರ ಬಂಧನ

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಹಾಗೂ ವಿದ್ಯಾರಣ್ಯಪುರಂ ಪೊಲೀಸರು, ಇಬ್ಬರನ್ನು ಬಂಧಿಸಿ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಬಂಧಿತರನ್ನು ಜೆ.ಪಿ.ನಗರದ ತಮ್ಮಣ್ಣೇಗೌಡ ಅಲಿಯಾಸ್ ಕುಂಟ(33)  ಮತ್ತು ಮಂಡ್ಯ ಜಿಲ್ಲೆಯ ಕೊತ್ತತ್ತಿ  ಕಾಳೆನಹಳ್ಳಿ ಗ್ರಾಮದ ದಿವಾಕರ್(34) ಎಂದು ಗುರುತಿಸಲಾಗಿದೆ..  ಜೆ.ಪಿ.ನಗರದ ಡಿ ಬ್ಲಾಕ್‍ನ 23ನೇ ಕ್ರಾಸ್‍ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿ ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ  26,210 ರೂ. ನಗದು ಹಾಗೂ 2 ಮೊಬೈಲ್ ಫೋನ್, ಒಂದು ಹೋಂಡಾ ಆ್ಯಕ್ಟೀವಾ ಸ್ಕೂಟರ್ ಅನ್ನು ವಶಪಡಿಸಿಕೊಂಡು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: