ಮೈಸೂರು

ವಿಮಾನ ನಿಲ್ದಾಣದಲ್ಲಿನ ಭದ್ರತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಯಾವ ರೀತಿ ಭದ್ರತೆ ಇದೆ ಎನ್ನುವುದನ್ನು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಪರಿಶೀಲಿಸಿದರು.

ಮಂಡಕಳ್ಳಿಗೆ ತೆರಳಿದ ಡಿ.ರಂದೀಪ್ ಏರೋಡ್ರೋಮ್ ಸಮಿತಿ ಹಾಗೂ ವಿಮಾನ ನಿಲ್ದಾಣ ಪರಿಸರ ನಿರ್ವಹಣೆ ಸಮಿತಿ ಸದಸ್ಯರ ಸಭೆಯಲ್ಲಿ ನಿಲ್ದಾಣದ ಭದ್ರತೆ ಹೆಚ್ಚಿಸುವ ಕುರಿತು ನಿರ್ದೇಶಕ ಮನೋಜ್ ಕುಮಾರ್ ಸಿಂಗ್ ಹಾಗೂ ಇತರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ರಾಷ್ಟ್ರಪತಿ ಸೇರಿದಂತೆ ಹಲವು ಗಣ್ಯರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ವಿಶೇಷ ವಿಮಾನದಲ್ಲಿ ಇಲ್ಲಿಗೆ ಬಂದು ಹೋಗುತ್ತಿರುವುದರಿಂದ ಕೈಗೊಳ್ಳಬೇಕಾದ ಹೆಚ್ಚಿನ ಭದ್ರತೆಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿದರು.

ಆರು ತಿಂಗಳಿಗೊಮ್ಮೆ ನಡೆಯುವ ಸಭೆ ಇದಾಗಿದ್ದು, ನಿಲ್ದಾಣದಲ್ಲಿ ಕೈಗೊಂಡಿರುವ ಮತ್ತು ಕೈಗೊಳ್ಳಬೇಕಾದ ಭದ್ರತೆ ಕುರಿತು ಅವಲೋಕನ ನಡೆಯಿತು. ರನ್ ವೇ ವಿಸ್ತರಣೆ ಉದ್ದೇಶಕ್ಕೆ ಭೂಸ್ವಾಧೀನ ಪಡಿಸಿಕೊಳ್ಳಲು ಕೈಗೊಂಡಿರುವ ಕ್ರಮಗಳ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಎಂಜಿನಿಯರ್ ಗಳು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

comments

Related Articles

error: