ದೇಶ

ಮುಂಬೈ ಕಟ್ಟಡ ಕುಸಿತ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಮುಂಬೈ,ಜು.17-ದಕ್ಷಿಣ ಮುಂಬೈನ ಡೊಂಗ್ರಿ ಪ್ರದೇಶದ ಟಂಡೆಲ್ ಸ್ಟ್ರೀಟ್ ನಲ್ಲಿ ನಿನ್ನೆ ಕೇಸರ್ಬಾಯಿ ಕಟ್ಟಡ ಕುಸಿದ ದುರಂತದಲ್ಲಿ ಈವರೆಗೂ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ.

ಕಟ್ಟಡ ಕುಸಿಯುವ ವೇಳೆ ಸುಮಾರು 60ಕ್ಕೂ ಹೆಚ್ಚು ಮಂದಿ ಕಟ್ಟಡದೊಳಗೆ ಇದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ 40ಕ್ಕೂ ಹೆಚ್ಟು ಮಂದಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿರುವವರ ಪತ್ತೆ ಹಚ್ಚಲು ಶ್ವಾನದಳವನ್ನೂ ಕೂಡ ಬಳಕೆ ಮಾಡಲಾಗುತ್ತಿದೆ.

ಇನ್ನು ಘಟನೆ ಕುರಿತು ತನಿಖೆಗೆ ಆದೇಶಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು, ಸುಮಾರು ನೂರು ವರ್ಷಗಳ ಹಳೆಯ ಕಟ್ಟಡ ಇದಾಗಿದ್ದು, 2012ರಲ್ಲೇ ಕಟ್ಟಡ ತೆರವುಗೊಳಿಸಲು ಆದೇಶ ನೀಡಲಾಗಿತ್ತು. ಅಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಂಪೂರ್ಣ ತನಿಖೆ ನಡೆಸಲಾಗುವುದು. 15 ಕುಟುಂಬ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: