ಮೈಸೂರು

ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ ಸಹೋದರಿಯ ಪುತ್ರನಿಂದ ವಿಶೇಷ ಪೂಜೆ

ಮೈಸೂರು,ಜು.17:- ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥಿಸಿ ಅವರ ಸಹೋದರಿಯ ಪುತ್ರ ಮೈಸೂರಿನಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಜರಬಾದ್ ನ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ದೋಸ್ತಿ ಸರ್ಕಾರ ಪತನವಾಗಿ ಯಡಿಯೂರಪ್ಪನವರು ಮುಖ್ಯಮಂತ್ರಿ ಗಾದಿಗೇರಲು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹೋದರಿ ಪುತ್ರ ರಾಜೇಶ್ ಅವರು ಪೂಜೆ ಸಲ್ಲಿಸಿದ್ದು, ಈ ಸಂದರ್ಭ ಮಾತನಾಡಿದ ಅವರು ರಾಜ್ಯದಲ್ಲಿ ರಾಜಕೀಯ ಗ್ರಹಣ ತೊಲಗಲಿ, ಯಡಿಯೂರಪ್ಪನವರ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: