ಸುದ್ದಿ ಸಂಕ್ಷಿಪ್ತ

ಹಾಲು ಉತ್ಪಾದಕರ ಒಕ್ಕೂಟದ ಕರಡು ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗಳಿಗೆ ಆಹ್ವಾನ

ಮಂಡ್ಯ (ಜುಲೈ 17): ಕರ್ನಾಟಕ ಸಹಕಾರ ಸಂಘಗಳ ಕಾಯಿದೆ 1959 ಮತ್ತು ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960ರ ಉಪಬಂಧಗಳ ಅಡಿಯಲ್ಲಿ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಗೆಜ್ಜಲಗೆರೆ ಆಡಳಿತ ಮಂಡಳಿಗೆ 2019-2024ರ ಅವಧಿಗೆ ನಿರ್ದೇಶಕರುಗಳ ಚುನಾವಣೆಯನ್ನು ನಡೆಸಲು ಕರ್ನಾಟಕ ಸಹಕಾರ ಸಂಘಗಳ ಕಾಯಿದೆ 1959 ಮತ್ತು ಕರ್ನಾಟಕ ಸಹಕಾರ ಸಂಘಗಳ ನಿಯಮಗಳು ಮತ್ತು ಉಪನಿಯಮ 13ಲ(3)ರ ಅನ್ವಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕರಡು ಮತದಾರರ ಪಟ್ಟಿಗೆ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ 30 ದಿನಗಳೊಳಗೆ ಕಚೇರಿ ಅವಧಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ಕರಡು ಮತದಾರರ ಪಟ್ಟಿಯನ್ನು ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಗೆಜ್ಜಲಗೆರೆ ಆಡಳಿತ ಕಚೇರಿಯಲ್ಲಿ, ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಎಲ್ಲಾ ತಾಲ್ಲೂಕುಗಳ ಉಪ ಕಚೇರಿಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪರಿಶೀಲನೆಗೆ ಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: