ಮೈಸೂರು

ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಾರಂಭೋತ್ಸವಕ್ಕೆ ಚಾಲನೆ

ಮೈಸೂರು ವಿಶ್ವವಿದ್ಯಾಲಯದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಿ.ರಂದೀಪ್ ಮಂಗಳವಾರ ಚಾಲನೆ ನೀಡಿದರು.

ಕೆರೆಯನ್ನು ಒಂದು ಸುಂದರ ವಾಯುವಿಹಾರ ತಾಣವನ್ನಾಗಿ ಮಾಡಲು ಕೆರೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆ 300 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಕೆರೆಯ ಸರ್ವಾಂಗೀಣ  ಅಭಿವೃದ್ಧಿಗೆ ಕಾಮಗಾರಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಕೆರೆ ಏರಿ ಎತ್ತರಿಕೆ ಹಾಗೂ ಅಗಲೀಕರಣ, ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯಗಳ ನಿರ್ಮಾಣ, ಮಹಾದ್ವಾರಗಳ ನಿರ್ಮಾಣ, ಯೋಗ ಹಾಗೂ ವಾಕರ್ಸ್ ಶೆಲ್ಟರ್ಸ್ ನಿರ್ಮಾಣ, ಚೈನ್ ಲಿಂಕ್ ಫೆನ್ಸಿಂಗ್, ಕುವೆಂಪು ವನ ಹಾಗೂ ಮಕ್ಕಳ ಉದ್ಯಾನವನ ಸೇರಿದಂತೆ ಸುಮಾರು 140 ಲಕ್ಷದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಯಶವಂತ ಡೋಂಗ್ರೆ, ಕುಲಸಚಿವ ಪ್ರೊ.ಆರ್.ರಾಜಣ್ಣ, ಪರೀಕ್ಷಾಂಗ ಕುಲಸಚಿವ ಪ್ರೊ.ಜೆ.ಸೋಮಶೇಖರ್, ಹಣಕಾಸು ಅಧಿಕಾರಿ ಡಾ.ಬಿ.ಮಹದೇವಪ್ಪ, ಕುಕ್ಕರಹಳ್ಳಿ ಕೆರೆಯ ಸಂರಕ್ಷಣಾ ಸಮಿತಿಯ ಸಂಚಾಲಕ ಡಾ.ಕೆ.ಎಂ.ಜಯರಾಮಯ್ಯ, ವಿಶ್ವವಿದ್ಯಾಲಯದ ತಾಂತ್ರಿಕ ವಿಭಾಗದ ಕಾರ್ಯಪಾಲಕ ಅಭಿಯಂತರ ಹೆಚ್.ಕಿಶೋರ್ ಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

comments

Related Articles

error: