ಸುದ್ದಿ ಸಂಕ್ಷಿಪ್ತ

ಪ್ರಗತಿಪರ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಜ್ಯ(ಮಂಡ್ಯ)ಜು.18:-  ಮಂಡ್ಯ ಜಿಲ್ಲೆಗೆ ಸಂಬಂಧಪಟ್ಟಂತೆ ಜಿಲ್ಲಾ ಮಟ್ಟದಲ್ಲಿ ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಸನ್ಮಾನಿಸಲು  ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಗಳನ್ನು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು / ಉಪನಿರ್ದೇಶಕರು, ತೋಟಗಾರಿಕೆ / ಪಶುಸಂಗೋಪನೆ / ರೇಷ್ಮೆ / ಮೀನುಗಾರಿಕೆ ಮತ್ತು ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ವಿ ಸಿ ಫಾರಂ, ಮಂಡ್ಯ ರವರ ಕಛೇರಿಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 31 ರೊಳಗಾಗಿ ಸಂಬಂಧಪಟ್ಟ ಕಛೇರಿಗಳಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ, ವಿ.ಸಿ. ಫಾರಂ, ಮಂಡ್ಯ ಹಾಗೂ ದೂರವಾಣಿ ಸಂಖ್ಯೆ 08232 277456,  ಮೊ. 9449864250 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: