ಮೈಸೂರು

ಭತ್ತದ ಬೆಳೆ ನಷ್ಟ ಪರಿಹಾರಕ್ಕೆ ಎಕರೆಗೆ 25ಸಾವಿರ ರೂ.ಕೂಡಲೇ ನೀಡಲು ಒತ್ತಾಯ : ರೈತರಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಸರ್ಕಾರಗಳ ನಿರ್ಲಕ್ಷ್ಯದಿಂದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕಬಿನಿ, ಕಾವೇರಿ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸಿದ ಪರಿಣಾಮ ಅಚ್ಚುಕಟ್ಟು ರೈತರ ಬೆಳೆಗಳು ಒಣಗುವಂತಾಗಿದೆ ಕಬಿನಿ ಅಚ್ಚುಕಟ್ಟು ರೈತರಿಗೆ ಭತ್ತದ ಬೆಳೆ ನಷ್ಟಕ್ಕೆ ನಷ್ಟ ಪರಿಹಾರ ಎಕರೆಗೆ ರೂ.25ಸಾವಿರ ಕೂಡಲೇ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ರೈತರು ಮೈಸೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಜ್ಯ ಕಬ್ಬುಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ ಕಬ್ಬು ಬೆಳೆದ ರೈತರಿಗೆ ನ್ಯಾಯಯುತ ದರ ನಿಗದಿ ಮಾಡಿ ಹಣ ಕೊಡಿಸಬೇಕಾದ ಸರ್ಕಾರ, ಕ್ಷೇತ್ರದ ಮುಖ್ಯಮಂತ್ರಿ, ಜಿಲ್ಲಾ ಮಂತ್ರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು. ಸಕ್ಕರೆ ಬೆಲೆ ಕ್ವಿಂಟಾಲ್ ಗೆ 4,200ರೂ.ಗೆ ಏರಿಕೆಯಾಗಿದ್ದರೂ ರೈತರಿಗೆ ನ್ಯಾಯಯುತ ಬೆಲೆ ಬಣ್ಣಾರಿ ಸಕ್ಕರೆ ಕಾರ್ಖಾನೆಯವರಿಂದಲೂ ಸಿಗುತ್ತಿಲ್ಲ. ತಾವು ಒಂದು ವಾರದಲ್ಲಿ ತುರ್ತು ಸಭೆ ಕರೆದು ಕ್ರಮ ಕೈಗೊಳ್ಳದಿದ್ದರೆ ತಮ್ಮ ಕಚೇರಿ ಮುಂದೆ ನಿರಂತರ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಕಬ್ಬುದರ ನಿಗದಿ ಹಾಗೂ ಕಬಿನಿ, ಕಾವೇರಿ ನೀರಿಗಾಗಿ ಹೋರಾಟ ಮಾಡಿದ ರೈತರ ಮೇಲಿನ ಮೊಕದ್ದಮೆಗಳನ್ನು ಕೈಬಿಡಬೇಕು. ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕೂಡಲೇ 30ಕೋಟಿ ಅನುದಾನ ಸರ್ಕಾರದ ವತಿಯಿಂದ ನೀಡಿ ಆರಂಭಿಸಬೇಕು, ಬ್ಯಾಂಕುಗಳು ರೈತರ ಕಬ್ಬಿನ ಹಣ ಸಾಲಕ್ಕೆ ಜಮಾ ಮಾಡುವುದು ಬರಗಾಲದ ಕಾರಣದಿಂದ ನಿಲ್ಲಬೇಕು. ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ನ್ನು ಸತತ 10ಗಂಟೆಗಳ ಕಾಲ ಪೂರೈಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಐನೂರಕ್ಕೂ ಅಧಿಕ  ರೈತರು ಪಾಲ್ಗೊಂಡಿದ್ದರು.

Leave a Reply

comments

Related Articles

error: