ಮೈಸೂರು

ಆಗಸ್ಟ್ 31: ‘ಹಿರಿಯ ನಾಗರಿಕರ ಕುಂದು ಕೊರತೆಗಳು’ ಕುರಿತ ವಿಚಾರ ಸಂಕಿರಣ

ರಾಜ್ಯ ಮಟ್ಟದ ಹಿರಿಯ ನಾಗರಿಕರ ಕುಂದು ಕೊರತೆಗಳ ವಿಚಾರ ಸಂಕೀರ್ಣವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸಕಾಲ ಸೇವಾ ಕೇಂದ್ರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದೆ.

ಆಗಸ್ಟ್ 31ರ ಬುಧವಾರದಂದು ಮಧ್ಯಾಹ್ನ 2:30ಕ್ಕೆ ಕಲಾಮಂದಿರದಲ್ಲಿ ಆಯೋಜಿಸಿದ್ದು ಜಿಲ್ಲಾ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ನ್ಯಾಯಾಧೀಶೆ ಕೆ.ಎಸ್. ಮುದಗಲ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಹಿರಿಯ ನಾಗರಿಕರ ಸಕಾಲ ಸೇವಾ ಕೇಂದ್ರದ ರಾಜ್ಯಾಧ್ಯಕ್ಷ ಪಿ.ರಾಜಪ್ಪ ವಹಿಸುವರು. ಜಿಲ್ಲಾ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಮೊಹಮ್ಮದ್ ಮುಜೀರುಲ್ಲಾ, ಭಾಗವಹಿಸುವರು.

ಮುಖ್ಯ ಅತಿಥಿಗಳಾಗಿ ಮೈಸೂರು ನಗರ ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿ ಡಾ.ಕೆ.ರಾಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಕೆ.ರಾಧ, ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಚನ್ನಪ್ಪ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಹೆಚ್. ಆರ್. ಶ್ರೀನಿವಾಸ್ ಉಪಸ್ಥಿತರಿರುವರು.

ದೂರು ನೀಡಿ: ಹಿರಿಯ ನಾಗರಿಕರಿಗೆ ಮಕ್ಕಳು ಹಾಗೂ ಸಾರ್ವಜನಿಕರಿಂದ ತೊಂದರೆಯಾದಲ್ಲಿ, ಬಲವಂತದಿಂದ ವೃದ್ಧಾಶ್ರಮಕ್ಕೆ ಸೇರಿಸಿದಲ್ಲಿ, ಪಿಂಚಣಿಯಿಂದ ವಂಚಿತರಾದ ಹಿರಿಯ ರಂಗಭೂಮಿ ಕಲಾವಿದರು, ನ್ಯಾಯಾಲಯದಲ್ಲಿ ದಾವೆ ಹೂಡಿ ಇ-ಮೇಲ್ ವಿಳಾಸ [email protected] ಮೂಲಕ ದೂರು ನೀಡಬಹುದು. ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರ ಸಕಾಲ ಸೇವಾ ಕೇಂದ್ರ ದೂರಿನನ್ವಯ ಉಚಿತವಾಗಿ ನ್ಯಾಯ ಒದಗಿಸುವುದು. ಈ ಸಂದರ್ಭದಲ್ಲಿ  ಹಿರಿಯ ನಾಗರಿಕರಿಗೆ ಗುರುತಿನ ಕಾರ್ಡ್ ನೀಡಲು ಅರ್ಜಿಯನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳಾದ: 0821-4191266, 9141614633, 9738151019 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: