ಮೈಸೂರು

ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ

ಮೈಸೂರು,.ಜು.22:-  ಕಬ್ಬು ಬೆಳೆಗಾರರ ಸಂಘ ಹಾಗೂ ಕಬಿನಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಹಾಗೂ ಕೆರೆ ಕಟ್ಟೆ ಗಳಿಗೆ ಶೀಘ್ರವಾಗಿ ನೀರು ತುಂಬಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಕಾಡಾ ಕಚೇರಿಯ ಮುಂಭಾಗ ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು  ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.  ಈ ವೇಳೆ  ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ ನಮ್ಮ ರೈತರಿಗೆ ನೀರಿಲ್ಲದ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಿರುವುದು ಖಂಡನೀಯ. ಇಲ್ಲಿನ ರೈತರಿಗೆ ಅನುಕೂಲ ವಾಗುವಂತೆ ಕೆರೆ ಕಟ್ಟೆಗಳಿಗೂ ನೀರು ಬಿಡಬೇಕು. ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನದಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಮುಖರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: