ಪ್ರಮುಖ ಸುದ್ದಿ

ಗಾರ್ಮೆಂಟ್ಸ್ ನೌಕರರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ : ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಲಾಠಿಚಾರ್ಜ್

ರಾಜ್ಯ(ಹಾಸನ)ಜು.24:- ಗಾರ್ಮೆಂಟ್ಸ್ ನೌಕರರು ಪ್ರತಿಭಟನೆ ನಡೆಸುತ್ತಿದ್ದ ವೇಳೆ  ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಹಿಮತ್ ಸಿಂಕಾ ಗಾರ್ಮೆಂಟ್ಸ್ ನಲ್ಲಿ ನೌಕರರು ತಮ್ಮ ಮೇಲೆ ದೌರ್ಜನ್ಯವಾಗುತ್ತಿದೆ. ಹೀಗಾಗಿ ಕೆಲಸ ಬಿಟ್ಟು ಹೋಗುತ್ತೇವೆ. ನಮ್ಮ ಬಾಕಿ ವೇತನ ನೀಡಿ ಎಂದು  ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾನಿರತ ನೌಕರರ ಮೇಲೆ  ಅಶ್ರುವಾಯು  ಪ್ರಯೋಗಿಸಿ ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಪ್ರಹಾರ ನಡೆಸಿದ ಹಿನ್ನೆಲೆ ಹಲವು ನೌಕರರಿಗೆ ಗಾಯಗಳಾಗಿದೆ. ಈ ಮೂಲಕ ಗಾರ್ಮೆಂಟ್ಸ್ ಆವರಣ ರಣಾಂಗಣವಾಗಿ ಮಾರ್ಪಟ್ಟಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: