ದೇಶ

ನೇಪಾಳದಲ್ಲಿ ಭೂಕುಸಿತ: 11 ಮಂದಿ ಬಲಿ

ನವದೆಹಲಿ,ಜು.25-ನಿರಂತರ ಮಳೆಯಿಂದಾಗಿ ಸಂಭವಿಸಿದ ಭೂ ಕುಸಿತದಿಂದಾಗಿ 11 ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ನೇಪಾಳದ ಗುಲ್ಮಿಯಾ ಜಿಲ್ಲೆಯಲ್ಲಿ ನಡೆದಿದೆ.

ಸತ್ಯವತಿ ಗ್ರಾಮೀಣ ಪುರಸಭೆಯ ವಾರ್ಡ್ ಸಂಖ್ಯೆ 3 ಮತ್ತು 4 ರಲ್ಲಿ ಘಟನೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಹಲವು ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಭೂ ಕುಸಿತದಲ್ಲಿ ನಾಪತ್ತೆಯಾದವರ ಪತ್ತೆಗೆ ನೇಪಾಳ ಸೇನೆ, ಪೊಲೀಸ್ ಸಿಬ್ಬಂದಿ ಸೇರಿದಂತೆ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಭೀಕರ ಮಳೆಗೆ ಮತ್ತಷ್ಟು ಹಾನಿಯಾಗುವ ಸಂಭವ ಇದೆ ಎಂದು ಹೇಳಲಾಗುತ್ತಿದೆ.

ಈ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ ಭೂ ಕುಸಿತದ ಆತಂಕ ಎದುರಾಗಿದ್ದು, ಸ್ಥಳೀಯ ನಿವಾಸಿಗಳು ಶಾಲೆಯೊಂದರಲ್ಲಿ ಆಶ್ರಯ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹಕ್ಕೆ ಸುಮಾರು 88ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ. (ಎಂ.ಎನ್)

Leave a Reply

comments

Related Articles

error: