ಮೈಸೂರು

ಕೆರೆಗಳಿಗೆ ನೀರು ತುಂಬಿಸಲು ಒತ್ತಾಯ : ಖಾಲಿ ಹಂಡೆ ಹಿಡಿದು ಪ್ರತಿಭಟನೆಗಿಳಿದ ವಾಟಾಳ್ ನಾಗರಾಜ್

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ  ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.
ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕ ವಾಟಾಳ್ ನಾಗರಾಜ್ ಖಾಲಿ ಹಂಡೆಗಳನ್ನು ಪ್ರದರ್ಶಿಸುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಅವರು ಚಾಮರಾಜನಗರಕ್ಕೆ ಕುಡಿಯುವ ನೀರಿನ ಸೌಲಭ್ಯ ಕೊಡಬೇಕು. ಒಂದು ತಿಂಗಳೊಳಗೆ ಕೆರೆಗಳನ್ನು ತುಂಬಿಸಲು ಗಡುವು ನೀಡಲಾಗುವುದು. ತುಂಬಿಸದಿದ್ದಲ್ಲಿ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಚಾಮರಾಜನಗರದಲ್ಲಿ ಸಂಪುಟ ಸಭೆಯನ್ನು ನಡೆಸುವಂತೆ ಮುಖ್ಯಮಂತ್ರಿ  ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು. ಮಹದಾಯಿ ಯೋಜನೆಗೆ ಕೇಂದ್ರ ಮಧ್ಯೆ ಪ್ರವೇಶಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.

Leave a Reply

comments

Related Articles

error: