ಮೈಸೂರು

ಹಕ್ಕುಪತ್ರ ನೀಡಲು ಒತ್ತಾಯಿಸಿ ಪ್ರತಿಭಟನೆ

ವಿಕಲಚೇತನರ ಹಕ್ಕುಪತ್ರವನ್ನು ನೀಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ವಿಕಲಚೇತನರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಜನವರಿ 13ರಂದು ಹಕ್ಕುಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿ ಮನವಿ ಪತ್ರ ನೀಡಲಾಗಿತ್ತು. ಆದರೆ ಫೈಲ್ ಗಳನ್ನು ವರ್ಗಾಯಿಸಿ ಸಮಯ ಹಾಳು ಮಾಡಲಾಗಿದೆಯೇ ವಿನಃ ಯಾವ ಕೆಲಸವೂ ಆಗಿಲ್ಲ ಎಂದು ಆರೋಪಿಸಿದರು. ನಮ್ಮ ನಿವೇಶನಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ಹಕ್ಕುಪತ್ರವನ್ನು ಕೂಡಲೇ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು

ಕಾರ್ಯದರ್ಶಿ ಚಂದ್ರನಾಯಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವರು ಪಾಲ್ಗೊಂಡಿದ್ದರು.

Leave a Reply

comments

Related Articles

error: