ಪ್ರಮುಖ ಸುದ್ದಿಮೈಸೂರು

ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಶಾಸಕಿ ಅನಿತಾ ಕುಮಾರ ಸ್ವಾಮಿ

ಮೈಸೂರು,ಜು.27:- ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಶಾಸಕಿ ಅನಿತಾ ಕುಮಾರ ಸ್ವಾಮಿ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಿಖಿಲ್ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಪ್ರತಿ ವರ್ಷ ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ. ಅದೇ ರೀತಿ ಈ ಬಾರಿಯೂ ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.

ಯಡಿಯೂರಪ್ಪ ಅವರು ಆತುರದಿಂದ ಸರ್ಕಾರ ರಚನೆ ಮಾಡುತ್ತಿದ್ದಾರೆ. ಬಹುಮತ ಇಲ್ಲದಿದ್ದರೂ ಸರ್ಕಾರ ರಚನೆ ಮಾಡುವ ಆತುರ ಅವರದು. ನಮ್ಮ ಮುಂದಿನ ನಿರ್ಧಾರಗಳ ಬಗ್ಗೆ ಸಭೆ ಕರೆಯಲಾಗಿದೆ.  ಸಭೆಯಲ್ಲಿ ಏನು ನಿರ್ಣಯ ಕೈಗೊಳ್ಳುತ್ತಾರೋ ಅದಕ್ಕೆ ಬದ್ಧರಾಗಿ ಕಾರ್ಯ ನಿರ್ವಹಿಸುತ್ತೇವೆ ಎಂದರು.

ಇದೇ ವೇಳೆ  ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ   ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕೂಡ  ಕುಟುಂಬ ಸಮೇತರಾಗಿ ಆಗಮಿಸಿದ್ದರು. ಪತ್ನಿ ಭವಾನಿ ರೇವಣ್ಣ, ಸೂರಜ್ ರೇವಣ್ಣ ಜೊತೆ ಆಗಮಿಸಿದ ಅವರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ  ರಾಜಕೀಯದ ಬಗ್ಗೆ ಮಾತನಾಡಲು ರೇವಣ್ಣ ನಿರಾಕರಿಸಿದ್ದು, ನಾನು ಪ್ರತಿ ಶುಕ್ರವಾರದಂತೆ ಇಂದೂ ಬಂದಿದ್ದೇನೆ ಎಂದು ರಾಜಕೀಯದ ಬಗ್ಗೆ ಮಾತನಾಡದೇ ಮೌನ ವಹಿಸಿದ್ದರು. ಎ.ಮಂಜು ಟೀಕೆಗೂ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: