ಮೈಸೂರು

ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿ : ಪ್ರಯಾಣಿಕರು ಪವಾಡ ಸದೃಶ ಪಾರು

ಮೈಸೂರು,ಜು.30:- ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು  ಪಲ್ಟಿಯಾದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕೋಡಿ ಅರಳಿಮರದ ಬಳಿ ನಡೆದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಎಚ್.ಡಿ.ಕೋಟೆ ತಾಲೂಕಿನ ಕೋಡಿ ಅರಳಿಮರದ ಬಳಿ  ಮೈಸೂರಿನಿಂದ ಮಾನಂದವಾಡಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸೊಂದು ಕೆರೆಯ ಹಳ್ಳಕ್ಕೆ ಬಿದ್ದಿದೆ. ಚಾಲಜನ ನಿಯಂತ್ರಣ  ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದ್ದು,  ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ಸಂಭವಿಸಿದ ಘಟನೆ ಇದಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: