ಪ್ರಮುಖ ಸುದ್ದಿ

ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದು ಪಡಿಸಿ ಆದೇಶ

ರಾಜ್ಯ(ಬೆಂಗಳೂರು)ಜು.30:-  ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದ ಟಿಪ್ಪು ಜಯಂತಿಯನ್ನು ರದ್ದು ಪಡಿಸಿ ಆದೇಶಿಸಲಾಗಿದೆ.

ಪ್ರತಿ ನವೆಂಬರ್​ 10 ರಂದು ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿತ್ತು. ಆದ್ರೆ ಈ ಬಾರಿಯಿಂದ ಆಚರಣೆಗೆ ರದ್ದು ಕೋರಿ ಮಾಜಿ ವಿಧಾನಸಭಾ ಸಭಾಧ್ಯಕ್ಷ, ಹಾಗೂ ಹಾಲಿ ಶಾಸಕ ಕೆ.ಜಿ.ಬೋಪಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದರು.  ಪ್ರಸ್ತಾವನೆಯನ್ನು 29/7/2019ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆದೇಶಕ್ಕೆ ಮಂಡಿಸಲಾಗಿತ್ತು. ಸಚಿವ ಸಂಪುಟ ಸಭೆಯು ರಾಜ್ಯಾದ್ಯಂತ ಆಚರಿಸುತ್ತಿರುವ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಗೊಳಿಸಲು ಆದೇಶ ಮಾಡಿದೆ.

ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಆಚರಿಸುತ್ತಿರುವ  ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: