ಸುದ್ದಿ ಸಂಕ್ಷಿಪ್ತ

ಆಗಸ್ಟ್ 5 ರಿಂದ ಉದರ ಶಸ್ತ್ರಚಿಕಿತ್ಸಾ ಶಿಬಿರ

ಮಂಡ್ಯ (ಜುಲೈ 30): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 5 ರಿಂದ 23 ರವರೆಗೆ ಮಂಡ್ಯ ಜಿಲ್ಲೆಯ ವಿವಿಧೆಡೆ ಉದರ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 5 ರಂದು ಬೆಳಿಗ್ಗೆ 10 ಗಂಟೆಗೆ ಕೆರಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಆಗಸ್ಟ್ 6 ರಂದು ಬೆಳಿಗ್ಗೆ 10 ಗಂಟೆಗೆ ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಆಗಸ್ಟ್ 7 ರಂದು ಬೆಳಿಗ್ಗೆ 10 ಗಂಟೆಗೆ ಕೀಲಾರ ಸಮುದಾಯ ಆರೋಗ್ಯ ಕೇಂದ್ರ, ಆಗಸ್ಟ್ 13 ರಂದು ಬೆಳಿಗ್ಗೆ 10 ಗಂಟೆಗೆ ಪಾಂಡವಪುರ ಸಾರ್ವಜನಿಕ ಆಸ್ಪತ್ರೆ, ಆಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಮತ್ತು ಬೆಳ್ಳೂರು ಸಮುದಾಯ ಆರೋಗ್ಯ ಕೇಂದ್ರ, ಆಗಸ್ಟ್ 16 ರಂದು ಬೆಳಿಗ್ಗೆ 10 ಗಂಟೆಗೆ ಕೆ.ಆರ್.ಪೇಟೆ ತಾಲ್ಲೂಕು ಆಸ್ಪತ್ರೆ, ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಗೆ ಮಿಮ್ಸ್ ಮಂಡ್ಯ, ಆಗಸ್ಟ್ 19 ರಂದು ಬೆಳಿಗ್ಗೆ 10 ಗಂಟೆಗೆ ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರ, ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಕ್ಯಾತುಂಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಆಗಸ್ಟ್ 23 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉದರ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: