ಮೈಸೂರು

ಕೆ.ಆರ್.ಪೇಟೆ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಜೈನಹಳ್ಳಿ ಸತ್ಯನಾರಾಯಣ ಗೌಡಗೆ ಸನ್ಮಾನ

ಮೈಸೂರು,ಜು.31:- ಕೆ.ಆರ್.ಪೇಟೆ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಮೈಸೂರಿನ ಜ್ಞಾನಬುತ್ತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜೈನಹಳ್ಳಿ ಸತ್ಯನಾರಾಯಣ ಗೌಡ ಅವರನ್ನು ಮೈಸೂರು ನಗರದ ಅನಿಕೇತನಾ ಸೇವಾ ಟ್ರಸ್ಟ್ ಮತ್ತು ನವ ಭಾರತ ನಿರ್ಮಾಣ ಸೇವಾ ಟ್ರಸ್ಟ್ ಸಂಯುಕ್ತವಾಗಿ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ಪ್ರೊ. ಎಂ. ಕೃಷ್ಣೇಗೌಡ ಅವರು ಸನ್ಮಾನಿಸಿದರು.

ಈ ಸಂದರ್ಭ ಅನಿಕೇತನಾ ಟ್ರಸ್ಟ್ ಅಧ್ಯಕ್ಷರಾದ ಕೆ.ವಿ. ಮಲ್ಲೇಶ್, ನವ ಭಾರತ ನಿರ್ಮಾಣ ಟ್ರಸ್ಟ್ ಅಧ್ಯಕ್ಷ ಕೆ.ವಿ. ಶ್ರೀಧರ್, ಕಾರ್ಯದರ್ಶಿ ಎಚ್. ಬಾಲಕೃಷ್ಣ, ಪ್ರೊ. ಕೃ.ಪ.ಗಣೇಶ್, ಪ್ರೊ. ಮಹೇಶ.ಸಿ ಮತ್ತಿತರರಿದ್ದರು. (ಎಸ್.ಎಚ್)

Leave a Reply

comments

Related Articles

error: