ಮೈಸೂರು

ಪ್ಲಾಸ್ಟಿಕ್‍ನಲ್ಲಿ ಸುತ್ತಿ ಬಿಸಾಡಿದ ಎರಡು ತಿಂಗಳ ಮಗು ಪತ್ತೆ

ಎರಡು ತಿಂಗಳ  ಗಂಡು ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಗವರ್ನಮೆಂಟ್ ಗೆಸ್ಟ್ ಹೌಸ್ ಒಳಗಡೆ ಯಾರೋ ಬಿಸಾಡಿ ಹೋದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗವರ್ನಮೆಂಟ್ ಗೆಸ್ಟ್ ಹೌಸ್ ನ ಒಳಗಡೆ ಆವರಣದಲ್ಲಿ ಯಾರೋ ಶಿಶುವನ್ನು ಬಿಸಾಡಿ ಹೋಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ನಜರ್ ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಆದರೆ ಶಿಶು ಆಗಲೇ ಮೃತಪಟ್ಟಿತ್ತು ಎಂದು ಹೇಳಲಾಗುತ್ತಿದೆ. ಮೃತದೇಹವನ್ನು ಕೆ. ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಯಾರ ಕೃತ್ಯ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

Leave a Reply

comments

Related Articles

error: