ಮೈಸೂರು

ಕರ್ನಾಟಕ ಸೇನಾಪಡೆ ವತಿಯಿಂದ ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ

ಕರ್ನಾಟಕ ಸೇನಾ ಪಡೆ ವತಿಯಿಂದ ಕರ್ನಾಟಕ ಏಕೀಕರಣದ ರೂವಾರಿ ಕೆಂಗಲ್ ಹನುಮಂತಯ್ಯ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪುಷ್ಪಾರ್ಚನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರಿನ ಗನ್ ಹೌಸ್ ಸರ್ಕಲ್ ನಲ್ಲಿರುವ ಜೆ.ಎಸ್.ಎಸ್. ವಿದ್ಯಾಪೀಠದ ಮುಂಭಾಗ ಹಮ್ಮಿಕೊಳ್ಳಲಾದ ಸ್ಮರಣೆ ಕಾರ್ಯಕ್ರಮದಲ್ಲಿ ಕೆಂಗಲ್ ಹನುಮಂತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯ್ಯಲಾಯಿತು. ಈ ಸಂದರ್ಭ ಡಾ.ಭಾಷ್ಯಂ ಸ್ವಾಮೀಜಿ ಕೆಂಗಲ್ ಹನುಂತಯ್ಯನವರ ಕೊಡುಗೆಗಳನ್ನು ಸ್ಮರಿಸಿದರು.

ಜೆಡಿಎಸ್ ನಗರಾಧ್ಯಕ್ಷ ಹರೀಶ್ ಗೌಡ, ಸಮಾಜಸೇವಕ ರಘುರಾಂ ವಾಜಪೇಯಿ, ಡಿ.ಟಿ.ಪ್ರಕಾಶ್, ತೇಜೇಶ್ ಲೋಕೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: