ಸುದ್ದಿ ಸಂಕ್ಷಿಪ್ತ

ಆ.3 ರಂದು ವಿಜ್ಞಾನ ಮತ್ತು ಗಣಿತ ಸಂವಾದ ಕಾರ್ಯಕ್ರಮ

ಮೈಸೂರು,.2-ಮೈಸೂರು ವಿಶ್ವವಿದ್ಯಾಲಯ ಸ್ಥಾಪಿಸಿರುವ ಶಾಲೆಗಳಲ್ಲಿ ವಿಜ್ಞಾನ ಅಭಿವೃದ್ಧಿ ಸಮಿತಿಯು ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಮೂಡಿಸುವ ದೃಷ್ಟಿಯಿಂದ ಪ್ರತಿ ತಿಂಗಳ ಮೊದಲನೇ ಶನಿವಾರ ವಿಜ್ಞಾನ ವಿವಿಧ ಕ್ಷೇತ್ರಗಳ ಪರಿಣಿತರ ಜೊತೆಗೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ.

ಕಾರ್ಯಕ್ರಮದ ಅಂಗವಾಗಿ ಆ.3 ರಂದು ಮಧ್ಯಾಹ್ನ 2 ಗಂಟೆಗೆ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮತ್ತು ಗಣಿತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಭೌತವಿಜ್ಞಾನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಪಿ.ವೆಂಕಟರಾಮಯ್ಯ, ಪ್ರೊ.ಗೋಪಾಲರಾವ್, ಸಸ್ಯಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಜನಾರ್ಧನ್, ಪ್ರೊ.ರವೀಶ್, ಪ್ರಾಣಿಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಪ್ರೊ.ರಮೇಶ್, ಗಣಿತಶಾಸ್ತ್ರ ಪ್ರಾಧ್ಯಾಪಕ ಡಾ.ರಂಗರಾಜನ್, ಭಾಭಾ ಪರಮಾಣು ಶಕ್ತಿ ಕೇಂದ್ರ ನಿವೃತ್ತ ವಿಜ್ಞಾನಿ ಡಾ.ಕೃಷ್ಣನ್ ಪರಿಣಿತರಾಗಿ ಭಾಗವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: