ಪ್ರಮುಖ ಸುದ್ದಿಮೈಸೂರು

ಮುಂದಿನ ರಾಜಕೀಯ ಹೆಜ್ಜೆ ಘೋಷಿಸುವರೇ ವಿಶ್ವನಾಥ್

ನಾಳೆ ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

ಮೈಸೂರು, ಆ.3 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡ ಹೆಚ್.ವಿಶ್ವನಾಥ್ ಅವರು ಇದೇ ಮೊದಲಬಾರಿಗೆ ಮಾಧ್ಯಮ ಗೋಷ್ಠಿಯ ಮೂಲಕ ರಾಜಕೀಯ ನಿರ್ಧಾರ ತಿಳಿಸುವ ನಿರೀಕ್ಷೆಯಿದ್ದು ನಾಳೆ ಬೆಳಗ್ಗೆ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆಯುವ ಗೋಷ್ಠಿಯಲ್ಲಿ ತಮ್ಮ ನಿರ್ಧಾರ ಹೊರ ಹಾಕುವರೇ ಎಂಬ ಪ್ರಶ್ನೆಯಿದೆ.

ಜಿಲ್ಲೆಯ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಹೆಚ್. ವಿಶ್ವನಾಥ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದ ನಂತರ ಅನರ್ಹಗೊಂಡು ಜೆಡಿಎಸ್ ಪಕ್ಷದಿಂದಲೂ ಉಚ್ಚಾಟನೆಗೊಂಡಿದ್ದಾರೆ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ವಿಶ್ವನಾಥ್, ತಾನು ಜೆಡಿಎಸ್ ಪಕ್ಷವನ್ನು ಬಿಡಲು ಕಾರಣ ಏನು? ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಅಂಶಗಳೇನು? ಎಂಬುದರ ಬಗ್ಗೆ ನಾಳಿನ ಪತ್ರಿಕಾಗೋಷ್ಠಿಯಲ್ಲಿ ಸಂಪೂರ್ಣ ಮಾಹಿತಿ ನೀಡುವ ನಿರೀಕ್ಷೆಯಿದ್ದು. ನಾಳೆ ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ತಮ್ಮ ರಾಜಕೀಯ ನಿರ್ಧಾರ ತಿಳಿಸುವ ಮಹತ್ವದ ಗೋಷ್ಠಿಯೆಂದೇ ಬಿಂಬಿತವಾಗಿದೆ.

ಚುನಾವಣಾ ರಾಜಕೀಯದಿಂದ ನಿವೃತ್ತಿ:

ನಿನ್ನೆ ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್‌.ವಿಶ್ವನಾಥ್, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಉಳಿಯಲಿದ್ದೇನೆ ಎಂದು ತಿಳಿಸಿದ್ದ ಅವರು, ಬಿಜೆಪಿ ಸೇರುವ ಬಗ್ಗೆ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ನಾಳಿನ ಸುದ್ದಿಗೋಷ್ಠಿಯಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: